ನಾವೆಲ್ಲರೂ ಪ್ರೀತಿ, ವಿಶ್ವಾಸ, ಸಂಸ್ಕೃತಿ, ಭ್ರಾತೃತ್ವ, ಪರಂಪರೆ, ಆಚಾರ-ವಿಚಾರವನ್ನು ಗುರು-ಹಿರಿಯರ ಮಾರ್ಗದರ್ಶನದಲ್ಲಿ ಶಾಶ್ವತವಾಗಿ ಮುಂದುವರಿಸುವ ಕೆಲಸ ಮಾಡಬೇಕು. ವಿಶ್ವಾಸಬದ್ಧ ಸಮಾಜ, ಅಭಿವೃದ್ಧಿಯ ಕರ್ನಾಟಕ ಹಾಗೂ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವಜನಾಂಗದೊಂದಿಗೆ ಕೈಜೋಡಿಸೋಣ. ಬಾರ್ಕೂರಿನ ಐತಿಹಾಸಿಕ ಶ್ರೀಮಂತಿಕೆ ಮರುಸೃಷ್ಟಿಸುವ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.