ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬೇಕು. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದಾಗಿದೆ. ಜಿಲ್ಲೆಯ ಸಂತೆಕಟ್ಟೆಯ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ ಹಾಗೂ ಸರ್ಕಾರಿ ಮಹಿಳಾ ಆಸ್ಪತ್ರೆಯಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ. ಅನಧಿಕೃತವಾಗಿ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಕೊಂಡುಕೊಂಡವರಿಗೆ 1 ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.