

ಉಡುಪಿ ಜಿಲ್ಲೆಯ 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆ, ತಾಲೂಕು, ಹೋಬಳಿ ಹಂತದ ಎಲ್ಲ ಅನುಷ್ಠಾನಾಧಿಕಾರಿಗಳು ಶಾಲೆ, ಮನೆ ಹಾಗೂ ಹಾಸ್ಟೆಲ್ಗಳಿಗೆ ಭೇಟಿ ಮಾಡಿ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ಅಗತ್ಯ ಮಾರ್ಗದರ್ಶನ ನೀಡಿದ್ದಾರೆ. ಕಳೆದ ವರ್ಷ ಉಡುಪಿ ಜಿಲ್ಲೆ ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದು, ಈ ವರ್ಷ ಪ್ರಥಮ ಸ್ಥಾನ ಗಳಿಸಲು ಎಲ್ಲ ರೀತಿಯಲ್ಲೂ ಇಲಾಖೆಯ ವತಿಯಿಂದ ಶೈಕ್ಷಣಿಕ ಚಟುವಟಿಕೆ ನಡೆಸಿದ್ದೇವೆ.