ಖಾಸಗಿ ಕಂಪನಿಗಳ ಸಹಕಾರದಲ್ಲಿ ರಸ್ತೆ ಅಭಿವೃದ್ಧಿ

ಮಣಿಪಾಲದ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಯಶ್​ಪಾಲ್​ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು. ಮಟ್ಟಾರು ವಸಂತ ಕಿಣಿ, ಪ್ರಭಾಕರ್​ ಪೂಜಾರಿ, ಕಲ್ಪನಾ ಸುಧಾಮ, ನರಸಿಂಹ ನಾಯಕ್​, ಟಿ.ಜಿ. ಹೆಗ್ಡೆ, ಹರೀಶ್​ ಶೆಟ್ಟಿ, ವಿಶ್ವನಾಥ ಭಟ್​, ಚಿತ್ತರಂಜನ್​ ಭಟ್​ ಇತರರಿದ್ದರು.
ಮಣಿಪಾಲದ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಯಶ್​ಪಾಲ್​ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು. ಮಟ್ಟಾರು ವಸಂತ ಕಿಣಿ, ಪ್ರಭಾಕರ್​ ಪೂಜಾರಿ, ಕಲ್ಪನಾ ಸುಧಾಮ, ನರಸಿಂಹ ನಾಯಕ್​, ಟಿ.ಜಿ. ಹೆಗ್ಡೆ, ಹರೀಶ್​ ಶೆಟ್ಟಿ, ವಿಶ್ವನಾಥ ಭಟ್​, ಚಿತ್ತರಂಜನ್​ ಭಟ್​ ಇತರರಿದ್ದರು.
Published on

* ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

* ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಗುದ್ದಲಿಪೂಜೆ

ಉಡುಪಿ: ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಸರ್ಕಾರದಿಂದ ಅನುದಾನದ ಕೊರತೆ ಉಂಟಾಗಿದ್ದರಿಂದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ಅವರ ಸಹಕಾರದಲ್ಲಿ ರಸ್ತೆ ಅಭಿವೃದ್ಧಿಪಡಿಸುವಂತಾಗಿದೆ. ಕ್ಷೇತ್ರದ ಶಾಸಕನಾಗಿ ಸ್ಥಳೀಯ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದಾಗ ಸಿಸ್​ಆರ್​ ನಿಧಿಯಿಂದ ಗರಿಷ್ಠ ಮೊತ್ತ ನೀಡುವ ಮೂಲಕ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಅವರೆಲ್ಲರ ಸಹಕಾರ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು.
ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಮುಖ್ಯ ರಸ್ತೆ ಕಾಮಗಾರಿಗೆ ಶನಿವಾರ (ಮಾ.14) ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ನಿತ್ಯವೂ ಸಂಚಾರ ಸಮಸ್ಯೆ

ಮಣಿಪಾಲ ಕೈಗಾರಿಕಾ ಪ್ರದೇಶದ ರಸ್ತೆ ಸಂಪೂರ್ಣ ಹದಗೆಟ್ಟು ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗಿತ್ತು. ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆಯ ಮೂಲಕ 40 ಲಕ್ಷ ರೂ. ಅನುದಾನ ಒದಗಿಸಿ ಸ್ಥಳಿಯ ಕಂಪನಿಗಹಳ ಸಿಎಸ್​ಆರ್​ ಅನುದಾನದ ಮೂಲಕ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.

ಅಭಿನಂದನೆ ಸಲ್ಲಿಸುತ್ತೇವೆ

ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಮಟ್ಟಾರು ವಸಂತ ಕಿಣಿ ಮಾತನಾಡಿ, ಕೈಗಾರಿಕಾ ಪ್ರದೇಶದ ಬಹುದಿನದ ಬೇಡಿಕೆಯಾಗಿದ್ದ ರಸ್ತೆ  ಕಾಮಗಾರಿಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್​ಪಾಲ್​ ಸುವರ್ಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಕಾಮಗಾರಿ ಶೀಘ್ರ ಪೂರ್ಣಗೊಂಡು ಸಂಚಾರಕ್ಕೆ ಆಗುತ್ತಿದ್ದ ಸಮಸ್ಯೆ ನಿವಾರಣೆ ಆಗಲಿ ಎಂದರು.
ಉಡುಪಿ ನಗರಸಭಾ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್​ ಪೂಜಾರಿ, ಮಾಜಿ ಸದಸ್ಯರಾದ ಕಲ್ಪನಾ ಸುಧಾಮ, ನರಸಿಂಹ ನಾಯಕ್​, ಟಿ.ಜಿ. ಹೆಗ್ಡೆ, ಹರೀಶ್​ ಶೆಟ್ಟಿ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳಾದ ವಿಶ್ವನಾಥ ಭಟ್​, ಚಿತ್ತರಂಜನ್​ ಭಟ್​, ವಲ್ಲಭ್​ ಭಟ್​, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್​ ಅಮೀನ್​, ಪ್ರಮುಖರಾದ ಕೃಷ್ಣ ಕುಲಾಲ್​, ಸದಾನಂದ ಪ್ರಭು, ನಿತಿನ್​ ಪೈ, ಪೃಥ್ವಿರಾಜ್​ ಹಾಗೂ ವಿವಿಧ ಕಂಪನಿಗಳ ಪ್ರಮುಖರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net