ಸಮಾಜದಲ್ಲಿ ಶಾಂತಿ ಕಾಪಾಡಲು ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯ

ಜಿಲ್ಲಾ ಪೊಲೀಸ್​ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್​ ಪಡೆ ಕೇಂದ್ರಸ್ಥಾನದಲ್ಲಿ ಆಯೋಜಿಸಲಾದ ಪೊಲೀಸ್​ ಹುತಾತ್ಮ ದಿನಾಚರಣೆ
police
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣನವರ್​ ಪೊಲೀಸ್​ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್​ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
Published on: 

ಉಡುಪಿ: ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಪೊಲೀಸ್​ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣನವರ್​ ಹೇಳಿದರು.

ಬುಧವಾರ ಜಿಲ್ಲಾ ಪೊಲೀಸ್​ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್​ ಪಡೆ ಕೇಂದ್ರಸ್ಥಾನದಲ್ಲಿ ಆಯೋಜಿಸಲಾದ ಪೊಲೀಸ್​ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್​ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.

ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿ ಸಮಾಜದಲ್ಲಿ ಜನರ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಿ, ಜನರ ಕಷ್ಟಕಾಲದ ಪರಿಸ್ಥಿತಿಯಲ್ಲಿ ಸಹಾಯಹಸ್ತ ಚಾಚುತ್ತಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್​ ಶಂಕರ್​ ಮಾತನಾಡಿ, 1959ರ ಅ. 21ರಂದು ಲಡಾಖ್​ ಸಮೀಪ ಚೀನಾ ಸೈನಿಕರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿದ ಸಿಆರ್​ಪಿಎಫ್​ 10 ಮಂದಿ ಪೊಲೀಸರು ವೀರಮರಣವನ್ನಪ್ಪಿದರು. 9 ಮಂದಿ ಪೊಲೀಸರು ಗಾಯಗೊಂಡು ಸೆರೆಯಾದರು. ಈ ಘಟನೆಯ ನೆನಪಿಗೆ ಪೊಲೀಸ್​ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದರು. ಹೆಚ್ಚುವರಿ ಪೊಲೀಸ್​ ಅಧೀಕ್ಷಕರಾದ ಸುಧಾಕರ ನಾಯ್ಕ್​, ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಡಿವೈಎಸ್ಪಿ ಎಚ್​.ಡಿ. ಕುಲಕರ್ಣಿ ಉಪಸ್ಥಿತರಿದ್ದರು. ಪೊಲೀಸ್​ ವಾದ್ಯವೃಂದದವರು ಅಬೈಡ್​ ವಿತ್​ ಗೀತೆಯನ್ನು ನುಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net