ರುಂಡವಿಲ್ಲದ ಶವ ಪತ್ತೆ ತನಿಖೆ ಚುರುಕು

Death
Death
Published on
ಕಾಸರಗೋಡು: ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ಪತ್ತೆಯಾದ ರುಂಡವಿಲ್ಲದ ಪುರುಷನ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಶರೀರದಿಂದ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಪ್ರಕರಣದ ನಿಗೂಢತೆ ಹೆಚ್ಚಾಗಿದೆ. ಶವವನ್ನು ಪ್ರಸ್ತುತ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಜಿಲ್ಲೆಯಲ್ಲಿ ನಾಪತ್ತೆಯಾದವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net