

ಬೈಂದೂರು: ಬೈಂದೂರು ಗ್ರಾಮದ ಬಾಡ ಎಂಬಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತರೊಬ್ಬರು ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ ಸುಮಾರು 6.50ರ ವೇಳೆಗೆ ಮಡಗಾಂವ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ರೈಲು ಕೊಂಕಣ ರೈಲ್ವೆ ಟ್ರಾೃಕ್‌ನ 627/3-4ನೇ ಕಿ.ಮೀ. ವ್ಯಾಪ್ತಿಯಲ್ಲಿ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.