ಗೂಡ್ಸ್ ರೈಲು ಡಿಕ್ಕಿಯಾಗಿ ಅಪರಿಚಿತ ಮೃತ್ಯು

Death
Death
Published on

ಬೈಂದೂರು ಗ್ರಾಮದ ಬಾಡ ಎಂಬಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತರೊಬ್ಬರು ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ ಸುಮಾರು 6.50ರ ವೇಳೆಗೆ ಮಡಗಾಂವ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ರೈಲು ಕೊಂಕಣ ರೈಲ್ವೆ ಟ್ರಾೃಕ್‌ನ 627/3-4ನೇ ಕಿ.ಮೀ. ವ್ಯಾಪ್ತಿಯಲ್ಲಿ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.

ರೈಲು ಅಪಘಾತದ ಕುರಿತು ಬಿಜೂರು ಸ್ಟೇಷನ್ ಮಾಸ್ಟರ್ ರೈಲ್ವೆ ಇಲಾಖೆ ಸಿಬ್ಬಂದಿ ನಾಗರಾಜ ನಾಯ್ಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 30ರಿಂದ 40 ವರ್ಷ ವಯಸ್ಸಿನ ಅಪರಿಚಿತರೊಬ್ಬರ ಮೃತದೇಹ ಪತ್ತೆಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net