ಸಚಿವೆ ನಿರ್ಮಲಾ ಸೀತಾರಾಮನ್​ ಜೂ.13ಕ್ಕೆ ಉಡುಪಿಗೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​.
Published on

ಉಚ್ಚಿಲದಲ್ಲಿ ಜಿಲ್ಲಾ ಬಿಜೆಪಿಯ ಪ್ರಶಿಕ್ಷಣ ವರ್ಗ ಉದ್ಘಾಟನೆ

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಜೂ.13ರಂದು ಉಡುಪಿಗೆ ಆಗಮಿಸಲಿದ್ದಾರೆ.
ಶುಕ್ರವಾರ (ಜೂ.12) ಸಂಜೆ 5:30ಕ್ಕೆ ದೆಹಲಿಯಿಂದ ವಿಮಾನದ ಮೂಲಕ ಹೊರಟು ರಾತ್ರಿ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದ ಮೂಲಕ ಕಾಪುನಲ್ಲಿರುವ ಮಂಥನ್​ ಬೀಚ್​ ರೆಸಾರ್ಟ್​ಗೆ ಆಗಮಿಸಿ ರಾತ್ರಿ ವಾಸ್ತವ್ಯ ಮಾಡಲಿದ್ದಾರೆ.
ಶನಿವಾರ ಬೆಳಗ್ಗೆ 8:15ಕ್ಕೆ ಕಾಪುವಿನಿಂದ ಹೊರಟು 8:30ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು, ಪರ್ಯಾಯ ಶೀರೂರು ಶ್ರೀಗಳಿಂದ ಆಶೀರ್ವಾದ ಪಡೆಯಲಿದ್ದಾರೆ.
ಉಡುಪಿ ಮಠದಿಂದ ಬೆಳಗ್ಗೆ 9 ಗಂಟೆಗೆ ಹೊರಟು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಠಾರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿರುವ 2 ದಿನಗಳ ಜಿಲ್ಲಾ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net