ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಟಿ. ಅಧ್ಯಕ್ಷತೆ ವಹಿಸಿದ್ದರು. ಪಂದ್ಯಾವಳಿಯಲ್ಲಿ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರ್ಗಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ 16 ತಂಡಗಳು ಭಾಗವಹಿಸಿದ್ದವು. ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಕಬಡ್ಡಿ ತೀರ್ಪುಗಾರರಾದ ಕೃಷ್ಣಾನಂದ್ ರಾವ್ ಹಾಗೂ ಉಜಿರೆಯ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಉಪಸ್ಥಿತರಿದ್ದರು.