ಸ್ಕೂಟರ್‌ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ

 ಅಪಘಾತಕ್ಕೆ ಒಳಗಾಗಿರುವ ದ್ವಿಚಕ್ರ ವಾಹನ.
ಅಪಘಾತಕ್ಕೆ ಒಳಗಾಗಿರುವ ದ್ವಿಚಕ್ರ ವಾಹನ.
Published on
ಬೆಳ್ತಂಗಡಿ: ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಗುರುವಾರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಅಪರಿಚಿತ ವಾಹನವು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರರನ್ನು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಬಾಲಕೃಷ್ಣ(32) ಎಂದು ಗುರುತಿಸಲಾಗಿದೆ. ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net