ಆದರ್ಶ ಜೀವನಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯ

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶೈಕ್ಷಣಿಕ ವರ್ಷದ ಪ್ರತಿಭಾ ಭಾರತಿ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶೈಕ್ಷಣಿಕ ವರ್ಷದ ಪ್ರತಿಭಾ ಭಾರತಿ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Published on
ಕುಂಬಳೆ: ಇಂದಿನ ಯುವಜಾನಂಗಕ್ಕೆ ಆದರ್ಶ ಜೀವನ ನಡೆಸಲು ಮೌಲ್ಯಯುತ ಶಿಕ್ಷಣದ ಅಗತ್ಯವಿದೆ. ಇದಕ್ಕೆ ಅನುಗುಣವಾಗಿ ನಮ್ಮ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣವನ್ನು ಮಕ್ಕಳಿಗೆ ಕಲಿಸಲಾಗುತ್ತಿದೆ ಎಂದು ಬದಿಯಡ್ಕ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಯಿರಾಂ ಕೆ.ಎನ್.ಕೃಷ್ಣ ಭಟ್ ಕಿಳಿಂಗಾರು ಹೇಳಿದರು.
ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶೈಕ್ಷಣಿಕ ವರ್ಷದ ಪ್ರತಿಭಾ ಭಾರತಿ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
10ನೇ ತರಗತಿ ವಿದ್ಯಾರ್ಥಿ ಶಾಶ್ವತ್ ಕೆ. ಅಧ್ಯಕ್ಷತೆ ವಹಿಸಿದ್ದರು. ಶಾಲಾಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಆಡಳಿತ ಸೇವಾ ಸಮಿತಿ ಕಾರ್ಯದರ್ಶಿ ಎಚ್.ಎಸ್.ಪ್ರಸಾದ್, ಜತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ, ಮುಖ್ಯಶಿಕ್ಷಕ ಶ್ಯಾಮ್ ಭಟ್, ಸಹ ಮುಖ್ಯಶಿಕ್ಷಕಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕಿಶೋರಕೃಷ್ಣ ಸ್ವಾಗತಿಸಿದರು. ಪ್ರೇರಣಾ ವಂದಿಸಿದರು. ಭವಿಷ್ ಹಾಗೂ ರೋಹನ್ ನಿರೂಪಿಸಿದರು. ಅಧ್ಯಾಪಕರಾದ ಹರಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net