ಕುಂದಾಪುರ: ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ಮತ್ತು ಉಪಾಧ್ಯಕ್ಷರಾಗಿ ಜಿ.ವಿಶ್ವನಾಥ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಎಚ್.ಎಲ್.ಕಾಮತ್ ಆಡಳಿತ ಮಂಡಳಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಚುನಾವಣಾ ರಿಟರ್ನಿಂಗ್ ಅಧಿಕಾರಿ, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಹಿರಿಯ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸಿ.ಎಂ. ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಜಿ.ವೆಂಕಟೇಶ ಶೆಣೈ ಕಳೆದ 10 ವರ್ಷಗಳಿಂದ ಸಹಕಾರಿ ನಿರ್ದೇಶಕರಾಗಿದ್ದು, 18 ತಿಂಗಳುಗಳಿಂದ ಅಧ್ಯಕ್ಷರಾಗಿ ಸಂಘದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ವಿಶ್ವನಾಥ ಆಚಾರ್ಯ 15 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 10 ವರ್ಷಗಳಿಂದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ರಿಟನಿರ್ಂಗ್ ಅಧಿಕಾರಿ ಸುನೀಲ್ ಕುಮಾರ್ ಸಿ. ಎಂ. ಅವರನ್ನು ಸಂಘದ ಪರವಾಗಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಎಚ್.ಗಣೇಶ್ ಕಾಮತ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಾಹಕ ಗಣೇಶ್ ನಾಯಕ್ ವಂದಿಸಿದರು.