ವಿಹಿಂಪ ಮುಖಂಡ ಅಲೋಕ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಹರ್ಷೇಂದ್ರ ಕುಮಾರ್ ಜತೆ ಮಾತುಕತೆ ನಡೆಸಿದರು. ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮತ್ತಿತರರಿದ್ದರು.

Published on

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಗುರುವಾರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾಕ್ಕೆ ಭೇಟಿ ನೀಡಿದರು. ಹಿಂದೂ ಧರ್ಮದ ಚಟುವಟಿಕೆ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಖ್ಯಸ್ಥರು, ಸಂತರ ಜತೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಆಗಮಿಸಿದ್ದರು.

ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಹರ್ಷೇಂದ್ರ ಕುಮಾರ್ ಜತೆ ಮಾತುಕತೆ ನಡೆಸಿದರು.
ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net