ದೇವಸ್ಥಾನದ ಅಭಿವೃದ್ಧಿಗೆ ಅನುದಾನದ ಭರವಸೆ

ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಪ ಸದಸ್ಯೆ ಆರತಿ ಕೃಷ್ಣ ಅವರಿಗೆ ದೇಗುಳದ ಅಭಿವೃದ್ಧಿಗೆ ಅನುದಾನ ಕೊಡಿಸುವಂತೆ ದೇವಳದ ವತಿಯಿಂದ ಮನವಿ ಸಲ್ಲಿಸಲಾಯಿತು. ಮಾಧವ ಬನ್ನಂಜೆ, ರಮೇಶ್ ಕಾಂಚನ್, ಪ್ರಭಾಕರ್ ಶೆಟ್ಟಿ, ದಿನೇಶ್ ಪುತ್ರನ್, ಶೇಖರ್ ಶೆಟ್ಟಿ, ಸುದೇಶ್ ಶೇಟ್, ಮಧುಸೂಧನ್ ಉಪಾಧ್ಯಾಯ ಇತರರಿದ್ದರು.

Published on

ಬನ್ನಂಜೆ ಮಹಾಲಿಂಗೇಶ್ವರ ದೇಗುಲಕ್ಕೆ ವಿಪ ಸದಸ್ಯೆ ಆರತಿ ಕೃಷ್ಣ ಭೇಟಿ

ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ

ಉಡುಪಿ: ಬನ್ನಂಜೆಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಶುಕ್ರವಾರ (ಸೆ.4) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ಮಧುಸೂಧನ್ ಉಪಾಧ್ಯಾಯ ಪ್ರಾರ್ಥನೆ ಸಲ್ಲಿಸಿ, ದೇವರ ಪ್ರಸಾದ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ದೇವಳದ ವತಿಯಿಂದ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿದ ಆರತಿ ಕೃಷ್ಣ, ಈ ವಿಚಾರವಾಗಿ ಸರ್ಕಾರದ ಗಮನ ಸೆಳೆದು ಗರಿಷ್ಠ ಪ್ರಮಾಣದಲ್ಲಿ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ದೇವಳದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಅರ್ಚಕ ವಾಸುದೇವ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಭಾಕರ್ ಶೆಟ್ಟಿ, ದಿನೇಶ್ ಪುತ್ರನ್, ಶೇಖರ್ ಶೆಟ್ಟಿ, ಸುದೇಶ್ ಶೇಟ್, ರಾಜೇಶ್ ಬನ್ನಂಜೆ , ಶಮಿತಾ ಎಸ್. ಭಂಡಾರಿ, ವಿದ್ಯಾಲತಾ ಶೆಟ್ಟಿ, ಮ್ಯಾನೇಜರ್  ರವಿರಾಜ್ ಭಟ್, ಅರುಣಕುಮಾರ್ ಉಪಸ್ಥರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net