

ಉಡುಪಿ : ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್ನ 22ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಸೆ. 27ರಂದು ಜರಗಲಿದೆ. ಈ ವರ್ಷ ವಿದ್ಯಾಪೋಷಕ್ ಹಾಗೂ ಯಕ್ಷಗಾನ ಕಲಾವಿದರ ಮಕ್ಕಳು ಸೇರಿ ಒಟ್ಟು 1,273 ವಿದ್ಯಾರ್ಥಿಗಳಿಗೆ 1,75,81,500 ರೂ. ಸಹಾಯಧನ ಹಾಗೂ 15 ಮಂದಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಗುವುದು ಎಂದು ಅಧ್ಯಕ್ಷ ಎಂ. ಗಂಗಾಧರ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 10 ಗಂಟೆಗೆ ಪರ್ಯಾಯ ಶ್ರೀ ಶೀರೂರು ಮಠದ ದಿವಾನ್ ಡಾ. ಉದಯ ಕುಮಾರ್ ಸರಳತ್ತಾಯ ಸಭೆ ಉದ್ಘಾಟಿಸಲಿದ್ದಾರೆ. ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಲಿದ್ದಾರೆ. ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಶುಭಾಶಂಸನೆಗೈಯಲಿದ್ದಾರೆ. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗೂರ್, ಶಿವಮೊಗ್ಗದ ಮಾಜಿ ರೋಟರಿ ಜಿಲ್ಲಾ ಗವರ್ನರ್ ಡಾ. ಪಿ. ನಾರಾಯಣ, ಗೋವಾ ಒಎನ್ಜಿಸಿ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್, ಆದರ್ಶ ಆಸ್ಪತ್ರೆಯ ಡಾ. ಜಿ. ಎಸ್. ಚಂದ್ರಶೇಖರ ಮೊದಲಾದವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾಪೋಷಕ್ ವಿದ್ಯಾರ್ಥಿಗಳ ಕುಟುಂಬಕ್ಕೆ ಮಾಹೆ ಕೊಡಮಾಡಿದ ಉಚಿತ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಆರೋಗ್ಯ ಕಾರ್ಡ ವಿತರಿಸಲಾಗುವುದು ಎಂದು ಹೇಳಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, 2.30ಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಾರ್ಷಿಕ ಸಂಚಿಕೆ ಕಲಾಂತರಂಗ ಬಿಡುಗಡೆಗೊಳಿಸಲಿದ್ದಾರೆ. ಮಂಗಳೂರು ಕರ್ಣಾಟಕ ಬ್ಯಾಂಕಿನ ಜಿ.ಎಂ. ಬಿ.ಜಿ. ಸಾಮಗ ಶುಭಾಶಂಸನೆಗೈಲಿದ್ದಾರೆ. ಡಿಆರ್ಎಂ ಇನ್ೋಸಿಸ್ ಮಂಗಳೂರಿನ ಉಪಾಧ್ಯಕ್ಷ ವಾಸುದೇವ ಕಾಮತ್ ಲ್ಯಾಪ್ಟಾಪ್ ವಿತರಿಸಲಿದ್ದಾರೆ. ಗೀತಾನಂದ ಫೌಂಡೇಶನ್ನ ಅಧ್ಯಕ್ಷ ಆನಂದ ಸಿ. ಕುಂದರ್, ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಎ. ಹರಿಕೃಷ್ಣ ಭಟ್ ಜಪಾನ್, ಉದ್ಯಮಿಗಳಾದ ಶ್ರೀಕಾಂತ ಅರಿಮಣಿತ್ತಾಯ, ಹರೀಶ್ ರಾಯಸ್, ಪಾರಂಪಳ್ಳಿ ನಟರಾಜ ಉಪಾಧ್ಯ, ಶ್ರೀಪತಿ ಭಟ್, ಮುನಿಯಾಲು ಉದಯಕುಮಾರ್ ಶೆಟ್ಟಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ಉದ್ಯಮಿ ಪಿ.ಪುರುಷೋತ್ತಮ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ. ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ಕುಮಾರ್ ಕೊಡ್ಗಿ ಹಾಗೂ ಗುರುರಾಜ ಗಂಟಿಹೊಳೆ ಭಾಗವಹಿಸಲಿದ್ದಾರೆ. ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಈವರೆಗೆ ಒಟ್ಟು 103 ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, 21 ಮನೆ ನಿಮಾರ್ಣ ಹಂತದಲ್ಲಿದೆ. ಹೊಸದಾಗಿ 32 ಮನೆಗಳಿಗೆ ಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಸಂಸ್ಥೆ ಉಪಾಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಸಹಕಾರ್ಯದರ್ಶಿ ನಾರಾಯಣ ಹೆಗಡೆ ಉಪಸ್ಥಿತರಿದ್ದರು.