ಡಯಟ್​ನಲ್ಲಿ ವೃತ್ತಿ ಮಾರ್ಗದರ್ಶಕ ಘಟಕ ಶ್ರೀ

ಉಡುಪಿಯಲ್ಲಿ ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್​ ಮೇಳವನ್ನು ಮಾರುತಿ ಉದ್ಘಾಟಿಸಿದರು. ಡಾ. ಅಶೋಕ್​ ಕಾಮತ್​, ಲೋಕೇಶ್​ ಸಿ., ವಿಜಯಕುಮಾರ್​, ನಾರಾಯಣ ಸ್ವಾಮಿ, ಮನೋಜ್​ ಕಡಬ, ಸುರೇಶ್​ ಭಟ್​ ಇತರರಿದ್ದರು.
ಉಡುಪಿಯಲ್ಲಿ ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್​ ಮೇಳವನ್ನು ಮಾರುತಿ ಉದ್ಘಾಟಿಸಿದರು. ಡಾ. ಅಶೋಕ್​ ಕಾಮತ್​, ಲೋಕೇಶ್​ ಸಿ., ವಿಜಯಕುಮಾರ್​, ನಾರಾಯಣ ಸ್ವಾಮಿ, ಮನೋಜ್​ ಕಡಬ, ಸುರೇಶ್​ ಭಟ್​ ಇತರರಿದ್ದರು.
Published on

* ಪ್ರಾಂಶುಪಾಲ ಡಾ. ಅಶೋಕ್​ ಕಾಮತ್​ ಭರವಸೆ

* ವಿದ್ಯಾರ್ಥಿಗಳಿಗಾಗಿ ಕೆರಿಯರ್​ ಮೇಳ ಉದ್ಘಾಟನೆ

ಉಡುಪಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮುಂದೆ ಹಲವಾರು ಕ್ಷೇತ್ರಗಳ ಆಯ್ಕೆಗಳಿಗೆ ಅವಕಾಶವಿದೆ. ಆದರೂ 10ನೇ ತರಗತಿ ಹಾಗೂ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ತಾವು ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂಬ ಪ್ರಶ್ನೆ, ಗೊಂದಲ ಕಂಡುಬರುತ್ತದೆ. ಹೀಗಾಗಿ ವಿದ್ಯಾರ್ಥಿಗಳಿಗೆ ನೆಚ್ಚಿನ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶಕ ಘಟಕ ಸ್ಥಾಪಿಸಿ, ಜಿಲ್ಲೆಯ ಎಲ್ಲ ವಿದ್ಯಾಸಂಸ್ಥೆ ಹಾಗೂ ಲಭ್ಯವಿರುವ ಕೋರ್ಸ್​ಗಳ ಮಾಹಿತಿ ಒಂದೇ ಕಡೆ ಲಭಿಸುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್​ ಕಾಮತ್​ ಭರವಸೆ ನೀಡಿದರು.
ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಮದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಮಂಗಳವಾರ (ಮಾ.17) ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್​ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಕಾರ್ಯಕ್ರಮ ಉದ್ಘಾಟಿಸಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಮಾತನಾಡಿ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನಕ್ಕೆ ಬೇಕಾದ ಮಾರ್ಗದರ್ಶನವು ಈ ಮೇಳದಲ್ಲಿ ಲಭಿಸಿಲಿದೆ. ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಜಿಪಂ ಯೋಜನಾ ನಿರ್ದೇಶಕ ವಿಜಯಕುಮಾರ್​ ವಿಶೇಷ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್​ ಸದಸ್ಯ ಮನೋಜ್​ ಕಡಬ, ಸುರೇಶ್​ ಭಟ್​, ವಿವಿಧ ವಿದ್ಯಾ ಸಂಸ್ಥೆಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕ ಡಾ. ಕಿಶೋರಕುಮಾರ್​ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಬ್ಯಾಂಕ್​, ಶಿಕ್ಷಣ ಸಂಸ್ಥೆ, ಇಲಾಖೆಗಳ ಮಳಿಗೆ

ಸರ್ಕಾರದ ವಿವಿಧ ಇಲಾಖೆಗಳು, ಬ್ಯಾಂಕ್​ಗಳು, ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ತಮ್ಮ ಮಳಿಗೆಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಶಿಕ್ಷಣ ಮತ್ತು ವೃತ್ತಿ ಸಂಬಂಧಿತ ಮಾಹಿತಿ ನೀಡಿದರು. 9ನೇ ತರಗತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳು, ಅವರ ಪಾಲಕರು ಮತ್ತು ಸಾರ್ವಜನಿಕರು ಪ್ರಯೋಜನ ಪಡೆದರು.
"

ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ಉದ್ಯೋಗ ನಷ್ಟದ ಭೀತಿ ಎದುರಾಗಿದೆ. ವಿದ್ಯಾರ್ಥಿಗಳು ಯಾವುದೋ ಒಂದು ಕ್ಷೇತ್ರ ನೆಚ್ಚಿಕೊಳ್ಳದೆ ತಂತ್ರಜ್ಞಾನ ಆಧಾರಿತ ಕೋರ್ಸ್​ ಆಯ್ಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಒಳ್ಳೆಯದಾಗಲಿದೆ. ಐಟಿಐ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ ಇದ್ದು, ವಿದ್ಯಾರ್ಥಿಗಳು ಈ ಕ್ಷೇತ್ರಗಳತ್ತವೂ ಗಮನ ಹರಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net