ತ್ಯಾಜ್ಯ ನಿರ್ವಹಣೆಯಿಂದ ಸುಸ್ಥಿರ ಭವಿಷ್ಯ ಸಾಧ್ಯ

 ಮೈಟ್‌ನಲ್ಲಿ ಪ್ಲಾಸ್ಟಿಕ್ ಮುಕ್ತ ಬದುಕಿನ ಅಗತ್ಯತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಪುರಸಭೆಯ ಪರಿಸರ ಅಭಿಯಂತೆ ಶಿಲ್ಪಾ ಎಸ್., ಪ್ರಾಂಶುಪಾಲ ಪ್ರಶಾಂತ್ ಸಿ.ಎಂ. ಮೊದಲಾದವರಿದ್ದರು.
ಮೈಟ್‌ನಲ್ಲಿ ಪ್ಲಾಸ್ಟಿಕ್ ಮುಕ್ತ ಬದುಕಿನ ಅಗತ್ಯತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಪುರಸಭೆಯ ಪರಿಸರ ಅಭಿಯಂತೆ ಶಿಲ್ಪಾ ಎಸ್., ಪ್ರಾಂಶುಪಾಲ ಪ್ರಶಾಂತ್ ಸಿ.ಎಂ. ಮೊದಲಾದವರಿದ್ದರು.
Published on
ಮೂಡುಬಿದಿರೆ: ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ (ಮೈಟ್) ಕಾಲೇಜಿನ ಎನ್.ಎಸ್.ಎಸ್. ವಿಭಾಗ, ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಇಗ್ಲಿಟಿಯಾ ವಿಜ್ಞಾನ ವೇದಿಕೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಕಾಲೇಜು ಆವರಣದಲ್ಲಿ ಆಚರಿಸಲಾಯಿತು.
ಮೂಡುಬಿದಿರೆ ಪುರಸಭೆ ಪರಿಸರ ಅಭಿಯಂತೆ ಶಿಲ್ಪಾ ಎಸ್. ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯ ನಿರ್ವಹಣೆಯ ಮೂಲಕ ಸುಸ್ಥಿರ ಭವಿಷ್ಯ ನಿರ್ಮಾಣದ ಅಗತ್ಯತೆಯನ್ನು ವಿವರಿಸಿದರು. ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಅನ್ವಯ ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂಬ ನಾಲ್ಕು ವಿಧದ ಕಸ ವಿಂಗಡಣೆಯ ಮಹತ್ವವನ್ನು ತಿಳಿಸಿದರು.
ಪರಿಸರ ಪೂರಕ ಜೀವನಶೈಲಿ ಪ್ರತಿಜ್ಞಾ ವಿಧಿ, ಶೂನ್ಯ ತ್ಯಾಜ್ಯ ಕ್ಯಾಂಪಸ್ ಪರಿಶೀಲನಾ ಪಟ್ಟಿ ಹಸ್ತಾಂತರ ಹಾಗೂ ಶೂನ್ಯ ತ್ಯಾಜ್ಯ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸಲಾಯಿತು. ಬಟ್ಟೆಯ ಚೀಲ ಬಳಕೆ, ಕಸವನ್ನು ಎಲ್ಲೆಂದರಲ್ಲಿ ಬಿಸಾಡದಿರುವುದು, ತ್ಯಾಜ್ಯವನ್ನು ಸುಡದಿರುವುದು ಹಾಗೂ ಸ್ವಚ್ಛ ಸರ್ವೇಕ್ಷಣ್ ನಾಗರಿಕ ಪ್ರತಿಕ್ರಿಯೆ ಅಭಿಯಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಲಾಯಿತು. ಪ್ರಾಂಶುಪಾಲ ಪ್ರಶಾಂತ್ ಸಿ.ಎಂ., ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಶೆಟ್ಟಿ, ಗಸ್ತು ಅರಣ್ಯ ಪಾಲಕ ಸಂದೇಶ್ ಉಪಸ್ಥಿತರಿದ್ದರು.
ಕಾಲೇಜು ಕ್ಯಾಂಪಸ್‌ನಲ್ಲಿ ಸಸಿ ನೆಡುವ ಅಭಿಯಾನ ನಡೆಯಿತು. ಎನ್‌ಸಿಸಿ ಕೆಡೆಟ್‌ಗಳು, ಎನ್.ಎಸ್.ಎಸ್. ಸ್ವಯಂಸೇವಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಸಸಿ ನೆಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net