

ಕಾಸರಗೋಡು: ಮೊಬೈಲ್ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ದೃಶ್ಯಗಳ ವೀಕ್ಷಣೆ ಹಾಗೂ ಇದನ್ನು ಸಂಗ್ರಹಿಸಿ ಇತರರಿಗೆ ರವಾನಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಬದಿಯಡ್ಕ ಠಾಣೆ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಪರೇಷನ್ ಪಿ ಹಂಟ್ ಅನ್ವಯ ಪುತ್ತಿಗೆ ಉಜಾರುಪದವಿನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 28ರ ಹರೆಯದ ಯುವಕ ಹಾಗೂ ಕಣ್ಣೂರು ಪೇಟೆಯಲ್ಲಿ ನಡೆಸಿದ ಇನ್ನೊಂದು ಕಾರ್ಯಾಚರಣೆಯಲ್ಲಿ 44ರ ಹರೆಯದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಮೊಬೈಲ್ ಫೋನ್ ವಶಕ್ಕೆ ತೆಗೆದುಕೊಂಡಿದ್ದಾರೆ.