

ವಿಜಯವಾಣಿ ಸುದ್ದಿಜಾಲ ಕಾರ್ಕಳ
ಮುಂದಿನ ವರ್ಷ ಫೆಬ್ರವರಿಯಲ್ಲಿ ಕಾರ್ಕಳದ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರು ಕಾರ್ಕಳ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮಹಾಮಸ್ತಕಾಭಿಷೇಕ ಸಂದರ್ಭ ಆಗಮಿಸುವ ಜನರಿಗೆ ಹಾಗೂ ಕಾರ್ಕಳ ನಗರದ ಪ್ರತಿಯೊಂದು ಮನೆಗಳಿಗೂ ನೀರಿನ ಸಂಪರ್ಕ ಒದಗಿಸುವ ಬಗ್ಗೆ ಯಾವುದೇ ತೊಂದರೆ ಉಂಟಾಗದಂತೆ ಈಗಿನಿಂದಲೇ ಸಮಗ್ರ ಪೂರ್ವಸಿದ್ಧತೆ ವಾಡಿಕೊಳ್ಳಬೇಕು ಎಂದು ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದರು.
ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಕಾರ್ಕಳದಲ್ಲಿ ಸಭೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಬಾರಿಯ ಮುಂಗಾರು ಮಳೆಯ ಪ್ರವಾಣ ಗಣನೀಯವಾಗಿ ಇಳಿಕೆಯಾಗಿದ್ದು, ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಪ್ರಸ್ತುತ ಕಾರ್ಕಳ ನಗರಕ್ಕೆ ನೀರು ಸರಬರಾಜು ವಾಡುವ ಮುಂಡ್ಲಿ ಜಲಾಶಯದ ನೀರಿನ ಸಂಗ್ರಹ, ಇತರ ಜಲಮೂಲಗಳ ಪರ್ಯಾಯ ಬಳಕೆ ಹಾಗೂ ಅದಕ್ಕೆ ಪೂರಕವಾಗಿ ಪರ್ಯಾಯ ವಾರ್ಗಗಳನ್ನು ಕಂಡುಕೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಲಭ್ಯವಿರುವ ನೀರಿನ ಸಂಪನ್ಮೂಲವನ್ನು ವೈಜ್ಞಾನಿಕವಾಗಿ ಬಳಸುವ ಬಗ್ಗೆ ಚರ್ಚಿಸಲಾಯಿತು.
ಕುಂದಾಪುರ ಸಹಾಯಕ ಆಯುಕ್ತರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖಾಧಿಕಾರಿಗಳು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಕಳ ನಗರದ ಒಳಚರಂಡಿ ವ್ಯವಸ್ಥೆ ಯೋಜನೆಯ ನಿರ್ವಹಣೆ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಮುಂದಿನ ವರ್ಷ ಈ ಯೋಜನೆಯ ನಿರ್ವಹಣಾ ಅವಧಿ ಮುಗಿಯಲಿದ್ದು, ಒಳಚರಂಡಿ ವ್ಯವಸ್ಥೆ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಸಮಗ್ರ ವಿವರಗಳೊಂದಿಗೆ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಲಾಯಿತು.
ಅಮೃತ್ ಯೋಜನೆಯಡಿ ಈಗಾಗಲೇ ಕಾರ್ಕಳ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜು ವಾಡುವ ಬಗ್ಗೆ ಪೈಪ್‌ಲೈನ್ ಅಳವಡಿಸಲಾಗಿದ್ದು, ಕೆಲವು ಕಡೆಗಳಲ್ಲಿ ಪೈಪ್‌ಲೈನ್ ಸಂಪರ್ಕ ಆಗದಿರುವ ಬಗ್ಗೆ ಸಾರ್ವಜನಿಕ ದೂರುಗಳಿವೆ. ಈ ನಿಟ್ಟಿನಲ್ಲಿ ವಾರ್ಡುವಾರು ಸಮೀಕ್ಷೆ ನಡೆಸಿ ಎಷ್ಟು ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲು ಬಾಕಿ ಇದೆ ಎಂಬ ವಾಹಿತಿಯನ್ನು ಕ್ರೋಢೀಕರಿಸಿ, ಬಾಕಿ ಇರುವ ಮನೆಗಳಿಗೆ ನೀರಿನ ಸಂಪರ್ಕ ಒದಗಿಸುವ ಬಗ್ಗೆ ಕಾಲಮಿತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು. ಅಮೃತ್ ಯೋಜನೆಯ ಮುಂದಿನ ದಿನಗಳ ನಿರ್ವಹಣೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಕ್ರಿಯಾ ಯೋಜನೆ ತಯಾರಿಸುವಂತೆ ಪುರಸಭೆ ಹಾಗೂ ನಗರ ನೀರು ಸರಬರಾಜು ಅಧಿಕಾರಿಗಳಿಗೆ ಸೂಚಿಸಿದರು.