ಸಮಸ್ಯೆ ಮೆಟ್ಟಿನಿಂತು ಸಾಧನೆ ಪಥದ ಸಾಗಬೇಕು

 ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಹರಿಕೃಷ್ಣ ಭಟ್ ಮಾತನಾಡಿದರು. ಪ್ರಮುಖರಾದ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್, ಡಾ.ಶಿವಪ್ರಸಾದ್ ಶೆಟ್ಟಿ ಇತರರಿದ್ದರು.
ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಹರಿಕೃಷ್ಣ ಭಟ್ ಮಾತನಾಡಿದರು. ಪ್ರಮುಖರಾದ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್, ಡಾ.ಶಿವಪ್ರಸಾದ್ ಶೆಟ್ಟಿ ಇತರರಿದ್ದರು.
Published on
ಕಾರ್ಕಳ: ದೇಶದ ಅಭಿವೃದ್ಧಿಗೆ ನಾವೇನು ಕೊಡುಗೆ ನೀಡಬೇಕು ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಚಿಂತಿಸಬೇಕು. ಸಮಸ್ಯೆಗಳನ್ನೆಲ್ಲಾ ಮೆಟ್ಟಿನಿಂತು ಸಾಧನೆಯ ಪಥದತ್ತ ಸಾಗಬೇಕು ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಹರಿಕೃಷ್ಣ ಭಟ್ ಹೇಳಿದರು.
ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ದಿ ವಿಭಾಗದ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಶಿಕ್ಷಕ ವೃಂದ, ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಇದ್ದರು.
ನಿಟ್ಟೆ ಎನ್‌ಎಸ್‌ಎಎಂ ಶಾಲೆಯ ಆರ್ಮಿ, ಎನ್‌ಸಿಸಿ ಘಟಕ, ತಾಂತ್ರಿಕ ಕಾಲೇಜಿನ ಎನ್‌ಸಿಸಿ ನೇವಲ್ ಘಟಕ ಹಾಗೂ ಕಾಲೇಜು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ವತಿಯಿಂದ ಪಥಸಂಚಲನ ನಡೆಯಿತು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಸ್ವಾಗತಿಸಿದರು. ಎನ್‌ಸಿಸಿ ನೇವಲ್ ಘಟಕದ ಸಂಯೋಜಕ ಡಾ.ಶಿವಪ್ರಸಾದ್ ಶೆಟ್ಟಿ ವಂದಿಸಿದರು. ನಿಟ್ಟೆ ಶಾಲೆ ಎನ್‌ಸಿಸಿ ಸಂಯೋಜಕಿ ಉಷಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net