ಶೌಚಗೃಹದಿಂದ ಹೊರಹೊಮ್ಮುತ್ತಿರುವ ಮಲಮೂತ್ರ ನೀರು ಸುತ್ತಮುತ್ತಲಿನ ಸಾರ್ವಜನಿಕ ಸ್ಥಳಗಳಲ್ಲಿ ಹರಿದು ದುರ್ವಾಸನೆ ಬೀರುತ್ತಿದ್ದು, ಬೀಚ್‌ಗೆ ಭೇಟಿ ನೀಡುವ ಪ್ರವಾಸಿಗರು ಮೂಗು ಮುಚ್ಚಿಕೊಂಡೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಗೃಹದ ಹಿಂದೆ ನಿಂತಿರುವ ತ್ಯಾಜ್ಯ ನೀರಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಮಳೆಗಾಲ ಸಂದರ್ಭ ಡೆಂಘೆ, ಮಲೇರಿಯಾ ಮೊದಲಾದ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಸ್ವಚ್ಛತೆ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದ ಮಹತ್ವದ ಪ್ರದೇಶವಾಗಿರುವ ತ್ರಾಸಿ ಬೀಚ್‌ನಲ್ಲಿ ಇಂತಹ ಅವ್ಯವಸ್ಥೆ ಕಂಡು ಬಂದಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.