ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮುಂಭಾಗದ ಹೆದ್ದಾರಿ ಬಳಿ ರಸ್ತೆ ದಾಟಲು ನಿಂತಿದ್ದ ಸಾಸ್ತಾನದ ಮಮತಾ(40) ಎಂಬುವರಿಗೆ ಶನಿವಾರ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅವರೊಂದಿಗಿದ್ದ ಸುಶೀಲಾ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಿಂದ ಹೆದ್ದಾರಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಮತಾ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.