ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

Death
Death
Published on

ಕಾಸರಗೋಡು: ರಸ್ತೆ ದಾಟುವ ಮಧ್ಯೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಗೃಹಿಣಿ ಮೃತಪಟ್ಟಿದ್ದಾರೆ. ಹೊಸದುರ್ಗದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮೀಪ ನಿವಾಸಿ ರಾಣಿ(60) ಮೃತೆ. ಜೂನ್ 24ರಂದು ಸಂಜೆ, ರಾಣಿ ಅವರು ವಿನಾಯಕ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿರುವ ಮಧ್ಯೆ ಬೈಕ್ ಡಿಕ್ಕಿಯಾಗಿದೆ.

ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿರುವುದರಿಂದ ಅಪಘಾತ ಸಂಭವಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಹೊಸದುರ್ಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಡಿಕ್ಕಿಯಾದ ಬೈಕ್ ಪರಾರಿಯಾಗಿದ್ದು, ಇದುವರೆಗೆ ಪತ್ತೆ ಸಾಧ್ಯವಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net