ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕಂಟೇನರ್ ಲಾರಿ ಡಿಕ್ಕಿಯಾಗಿ ಮೊಡಂಕಾಪುವಿನ ಪ್ರೆಸಿಲ್ಲಾ ಡಿಸೋಜ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿ.ಸಿ.ರೋಡಿನ ಕರ್ಣಾಟಕ ಬ್ಯಾಂಕ್ ಬಳಿ ನಿಂತಿದ್ದಾಗ ಲಾರಿ ಡಿಕ್ಕಿಯಾಗಿ ತಲೆ ಹಾಗೂ ಭುಜಕ್ಕೆ ಗಾಯವಾಗಿದೆ.
ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.