ಹಳೆಯಂಗಡಿ ಮಹಿಳಾ ಮಂಡಲ ಆಶ್ರಯದಲ್ಲಿ ಸ್ವ ಉದ್ಯೋಗ ಮಾಹಿತಿ ಶಿಬಿರ ನಡೆಯಿತು. ಮಹಿಳಾ ಮಂಡಲ ಅಧ್ಯಕ್ಷೆ ರೇಷ್ಮಾ ಅಶ್ರಫ್, ಕೃಷಿ ಅಧಿಕಾರಿ ಸಂತೋಷ್ ಕುಮಾರ್ ಮೊದಲಾದವರಿದ್ದರು.
Published on:
Copied
Follow Us
ಹಳೆಯಂಗಡಿ: ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಮುಂದೆ ಬರಬೇಕು. ಸ್ವ ಉದ್ಯೋಗದ ಮೂಲಕ ಸಾಧಕರಾಗಬೇಕು ಎಂದು ಮಹಿಳಾ ಮಂಡಲ ಅಧ್ಯಕ್ಷೆ ರೇಷ್ಮಾ ಅಶ್ರಫ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲ್ಕಿ ವಲಯ ಪಡುಪಣಂಬೂರು, ಹಳೆಯಂಗಡಿ ಮಹಿಳಾ ಮಂಡಲ ಆಶ್ರಯದಲ್ಲಿ ಗುರುವಾರ ಯುವತಿ ಮತ್ತು ಮಹಿಳಾ ಮಂಡಲದ ಸಭಾಂಗಣದಲ್ಲಿ ಆಯೋಜಿಸಲಾದ ಸ್ವ ಉದ್ಯೋಗ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.
ಮಹಿಳಾ ಮಂಡಲ ಅಧ್ಯಕ್ಷೆ ರೇಷ್ಮಾ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಕೃಷಿ ಅಧಿಕಾರಿ ಸಂತೋಷ್ ಕುಮಾರ್, ಯೋಜನೆ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಪವಿತ್ರ ಆಚಾರ್ಯ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮಂಡಲ ಕೋಶಾಧಿಕಾರಿ ರಾಜೇಶ್ವರಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಸವಿತಾ ಬೆಳ್ಳಾಯರು ವಂದಿಸಿದರು. ಸೇವಾ ಪ್ರತಿನಿಧಿ ಮೋಹಿನಿ ಕೆ. ನಿರೂಪಿಸಿದರು.