ಬಸ್ ಡಿಕ್ಕಿಯಾಗಿ ಕಾರ್ಮಿಕ ಸಾವು

ACCIDENT
ACCIDENT
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಳಿ ಬಸ್ ಡಿಕ್ಕಿಯಾಗಿ ಬಾಗಲಕೋಟೆ ಜಿಲ್ಲೆಯ ಹನುಮಂತ ಛಲವಾದಿ(50) ಎಂಬುವರು ಭಾನುವಾರ ಮೃತಪಟ್ಟಿದ್ದಾರೆ. ಉದ್ಯಾವರ ಬಳಿ ಬಾಡಿಗೆ ಮನೆಯಲ್ಲಿ ಕುಟುಂಬದವರೊಂದಿಗೆ ವಾಸವಾಗಿದ್ದ ಅವರು ಉದ್ಯಾವರದಲ್ಲಿರುವ ಸಭಾಭವನವೊಂದರ ಕಾರ್ಯಕ್ರಮಕ್ಕೆ ತೆರಳಲು ರಸ್ತೆ ಬದಿ ನಿಂತಿದ್ದ ವೇಳೆ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಅದೇ ಬಸ್‌ನಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ಹನುಮಂತ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಈ ನಡುವೆ ಚಾಲಕ ಬಸ್‌ನೊಂದಿಗೆ ಪರಾರಿಯಾಗಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net