ಕೆಂಪುಕಲ್ಲು ಲಾರಿ ಪಲ್ಟಿಯಾಗಿ ಕಾರ್ಮಿಕ ಸಾವು

ಮಗುಚಿ ಬಿದ್ದಿರುವ ಲಾರಿ
ಮಗುಚಿ ಬಿದ್ದಿರುವ ಲಾರಿ
Published on
ಬಂಟ್ವಾಳ: ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಕಾರ್ಮಿಕ, ಕಾವಳಪಡೂರು ಕೊಲೆಂಜಿಕೋಡಿ ನಿವಾಸಿ ಪ್ರಮೋದ್(42) ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಲಾರಿಯಲ್ಲಿದ್ದ ಸುನೀಲ್, ವಿಜಯ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲ್ಲಿನ ಕ್ವಾರಿಯಿಂದ ಕೆಂಪುಕಲ್ಲು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಲಾರಿಯಡಿ ಸಿಲುಕಿದ್ದ ಪ್ರಮೋದ್, ಸುನೀಲ್, ವಿಜಯ್ ಎಂಬುವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಂಭೀರ ಗಾಯಗೊಂಡಿದ್ದ ಪ್ರಮೋದ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net