ಅನಾರೋಗ್ಯದಿಂದ ಕಾರ್ಮಿಕ ಸಾವು

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನಾಲೆಗೆ ಬಿದ್ದು ಇಬ್ಬರು ಯುವಕರ ಸಾವು
ನಾಲೆಗೆ ಬಿದ್ದು ಇಬ್ಬರು ಯುವಕರ ಸಾವು
Published on: 

ಪಡುಬಿದ್ರಿ: ಉದ್ಯಾವರ ಪಿತ್ರೋಡಿ ಫಿಶ್ ಕಟ್ಟಿಂಗ್ ಶೆಡ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಲದ ಕಾರ್ಮಿಕ ಪರೊಮೇಶ್ವರ ಕಿಸ್ಕು(30) ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಮನೆಗೆ ವಾಪಸಾಗಿದ್ದರು. ಬಳಿಕ ಸ್ನೇಹಿತ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net