ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಬೆನ್ನೆಲುಬು

 ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಎಲ್‌ಎಗಳ ಕಾರ್ಯಾಗಾರ, ಮಾಹಿತಿ ಶಿಬಿರದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಎಸ್., ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಮೊದಲಾದವರಿದ್ದರು.
ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಎಲ್‌ಎಗಳ ಕಾರ್ಯಾಗಾರ, ಮಾಹಿತಿ ಶಿಬಿರದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಎಸ್., ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಮೊದಲಾದವರಿದ್ದರು.
Published on
ಕಿನ್ನಿಗೋಳಿ: ಕಾರ್ಯಕರ್ತರು ಪಕ್ಷಕ್ಕೆ ನೀಡಿದ ಸೇವೆಯನ್ನು ಪಕ್ಷ ಎಂದೂ ಮರೆಯುವುದಿಲ್ಲ. ಸಂವಿಧಾನದ ಕೊಲೆ ಮಾಡುತ್ತಿರುವ ರಾಷ್ಟ್ರದ್ರೋಹಿಗಳನ್ನು ಕಾಂಗ್ರೆಸ್ ಪಕ್ಷ ಎಂದು ಸಹಿಸುವುದಿಲ್ಲ. ಇದಕ್ಕಾಗಿ ದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಕಟಿಬದ್ಧರಾಗಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಕಿನ್ನಿಗೋಳಿ ಸರಾಫ್ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಎಲ್‌ಎಗಳ ಕಾರ್ಯಾಗಾರ, ಮಾಹಿತಿ ಶಿಬಿರದಲ್ಲಿ ಮಾತನಾಡಿದರು.
ಮಾಜಿ ಸಚಿವ ಕೆ.ಅಭಯ್‌ಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಎಸ್‌ಐಆರ್ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತರಬೇತುದಾರ ಅಮಿತಾ ತರಬೇತಿ ಕಾರ್ಯಕ್ರಮ ನಿರ್ವಹಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಎಸ್., ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್, ಕೆಪಿಸಿಸಿ ಸದಸ್ಯರಾದ ಎಚ್.ವಸಂತ ಬರ್ನಾಡ್, ಚಂದ್ರಹಾಸ ಸನಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಿಲ್ಮಾ ಡಿಕೋಸ್ಟ, ಸುಪ್ರಿಯಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಿತ್ ಪೂಜಾರಿ, ಅನೀಶ್ ಡಿಸೋಜ, ಕಿನ್ನಿಗೋಳಿ ಪ್ರಜಾಪ್ರತಿನಿಧಿ ಅಧ್ಯಕ್ಷ ಪ್ರಮೋದ್ ಕುಮಾರ್, ಪುರಂದರ ದೇವಾಡಿಗ ಮೂಡುಬಿದಿರೆ ಮತ್ತಿತರರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸ್ವಾಗತಿಸಿದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ರ್ಸ್ರಾಜ್ ಬಾಳ ವಂದಿಸಿದರು. ಕಿನ್ನಿಗೋಳಿ ಪಪಂ ಸದಸ್ಯ ಪ್ರಕಾಶ್ ಆಚಾರ್ಯ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net