ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣವರ್​ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣವರ್​ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
Published on
ಉಡುಪಿ: ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಹೀಗಾಗಿ ಸಾರ್ವಜನಿಕರು ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ನೋಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದ ಮಾತ್ರ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಉಳಿಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣವರ್​ ಹೇಳಿದರು.

ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಹಮ್ಮಿಕೊಳ್ಳಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ- ಉದ್ಘಾಟಿಸಿ ಮಾತನಾಡಿದರು. ಹಕ್ಕುಗಳ ಬಗ್ಗೆ ಮಾತ್ರ ಯೋಚಿಸಿ ಕರ್ತವ್ಯಗಳನ್ನು ಮರೆತರೆ ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಹಿರಿಯ ಸಿವಿಲ್​ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮನು ಪಟೀಲ್​ ಬಿ. ವೈ ಮಾತನಾಡಿ, ಮಾನವ ಹಕ್ಕುಗಳು ದೈನಂದಿನ ಅಗತ್ಯತೆಗಳಾಗಿವೆ. ನಮ್ಮ ಹಕ್ಕುಗಳ ಜೊತೆಗೆ ಇತರರ ಹಕ್ಕುಗಳನ್ನು ಅರಿತು ಗೌರವಿಸಿ ಬದುಕುವುದನ್ನು ಕಲಿಯಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಬಿದ್​ ಗದ್ಯಲ್​ ವಹಿಸಿ ಅಧ್ಯಕ್ಷತೆ ವಹಿಸಿ, ಮಾನವಹಕ್ಕುಗಳನ್ನು ಗೌರವಿಸುವುದು, ಕರ್ತವ್ಯಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಎಲ್ಲರೂ ಸಮಾನರಾಗಿದ್ದು, ಯಾವುದೇ ತಾರತಮ್ಯಗಳಿಗೆ ಅವಕಾಶ ನೀಡಬಾರದು ಎಂದರು.

ಗೋವಿಂದ ದಾಸ್​ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಆಶಾಲತಾ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲರು ಪ್ರೊ. ಸೋಜನ್​ ಕೆ.ಜಿ, ಮತ್ತು ಐಕ್ಯೂಎಸಿ ಸಂಚಾಲಕಿ ಪ್ರ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು ವಿದ್ಯಾರ್ಥಿಗಳಿಗೆ ಮಾನವ ಹಕ್ಕು ಪ್ರಮಾಣ ವಚನವನ್ನು ಬೋಧಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net