ಶೀರೂರು ಮಠದ ಲಕ್ಷ್ಮೀವರ ತೀರ್ಥರ ಆರಾಧನೆ

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಮೆರವಣಿಗೆ ನಡೆಯಿತು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಮೆರವಣಿಗೆ ನಡೆಯಿತು.
Published on
ಉಡುಪಿ: ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಪ್ರಯುಕ್ತ ಕೃಷ್ಣಮಠದಲ್ಲಿ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪಾದ್ಯ ಸಮರ್ಪಿಸಿದರು.

ಬಳಿಕ ಭೋಜನ ಶಾಲೆಯಲ್ಲಿ ಪಲ್ಲ ಪೂಜೆ ನಡೆಸಿದರು. ಅನಂತರ ಭಕ್ತರಿಗೆ ಅನ್ನಸಂತರ್ಪಣೆ ಜರಗಿತು. ಶೀರೂರಿನಲ್ಲಿರುವ ಮೂಲಮಠದಲ್ಲಿ ಆರಾಧನೆಯ ಪ್ರಯುಕ್ತ ವಿರಜಾ ಹೋಮ, ಪೂರ್ಣಾಹುತಿ ಹಾಗೂ ಹಸ್ತೋದಕ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಾಯಂಕಾಲ ಶ್ರೀಗಳ ಭಾವಚಿತ್ರದೊಂದಿಗೆ ರಥಬೀದಿಯಲ್ಲಿ ಮೆರವಣಿಗೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net