

* ಉಡುಪಿಯ 6 ಕೇಂದ್ರಗಳಲ್ಲಿ ನಡೆದ ಎಕ್ಸಾಂ
ಕೇಂದ್ರದ ಸುತ್ತ ಬಿಗಿ ಭದ್ರತೆ
ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3,395 ಹುದ್ದೆ ಹಾಗೂ ಸ್ಥಳೀಯ ವೃಂದದ 196 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಉಡುಪಿಯ 6 ಕೇಂದ್ರಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಲಿಖಿತ ಪರೀಕ್ಷೆ ನಡೆದಿದೆ. ಎಲ್ಲ ಕೇಂದ್ರಗಳಿಗೂ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದು ಯಾವುದೇ ಅಕ್ರಮ, ನಕಲು ಅಥವಾ ಡಿಬಾರ್ ಪ್ರಕರಣ ನಡೆದಿಲ್ಲ. ಯಾವುದೇ ಅವ್ಯವಹಾರ ನಡೆಯದಂತೆ ತಡೆಯಲು ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು.
— ಸ್ವರೂಪಾ ಟಿ.ಕೆ. ಉಡುಪಿ ಜಿಲ್ಲಾಧಿಕಾರಿ.