ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರು, ಉಡುಪಿ ಘಟಕ ಹಾಗೂ ಮಹಿಳಾ ವಿಭಾಗದ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮದ ನಿಮಿತ್ತ ಜೂ. 27ರಂದು ಮಧ್ಯಾಹ್ನ 2:30ಕ್ಕೆ ಉಡುಪಿಯ ಪುರಭವನದಲ್ಲಿ ತೆಂಕುತಿಟ್ಟು ಯಕ್ಷಗಾನದ 2ನೇ ವರ್ಷದ ರಸದೌತಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಆರಂಭದಲ್ಲಿ 'ಸಮುದ್ರ ಮಥನ' ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ.
ಸಂಜೆ 4:15ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಹೈದರಾಬಾದ್ನ ಹೊಟೇಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ 'ಯಕ್ಷಧ್ರುವ ಕಲಾ ಗೌರವ' ಅರ್ಪಿಸಲಾಗುತ್ತಿದೆ.
ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ. ಜಿ.ಶಂಕರ್, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.