ಡಾ. ಕೆ. ಎಂ. ರಾಘವ ನಂಬಿಯಾರ್ ಅವರಿಗೆ ಈ ಬಾರಿಯ ಅತ್ಯುನ್ನತ ಪಾರ್ಥಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರೆಂಜಾಳ ರಾಮಕೃಷ್ಣ ರಾವ್, ವಿಷ್ಣು ಮಂಜಪ್ಪ ಆಚಾರಿ ಬಳ್ಕೂರು, ಡಿ. ಮನೋಹರ್ ಕುಮಾರ್, ಮುರಲಿ ಕಡೆಕಾರ್ ಮತ್ತು ರಮೇಶ್ ಅವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಲಭಿಸಿದೆ. ಸಣ್ಣಮಲ್ಲಯ್ಯ, ಲಕ್ಷ್ಮಣ ಗೌಡ ಬೆಲಾಲ್, ದಾಸಪ್ಪ ಗೌಡ ಗೇರುಕಟ್ಟೆ, ಎ. ಬಿ. ನಾಗರಾಜು, ದಾಸನಡ್ಕ ರಾಮ ಕುಲಾಲ್, ರಾಜೀವ ಶೆಟ್ಟಿ ಹೊಸಂಗಡಿ, ಕೇಶವ ಶಕ್ತಿನಗರ, ಸದಶಿವ ಕುಲಾಲ್, ಬೆಳ್ಳಾರೆ ಮಂಜುನಾಥ ಭಟ್ ಮತ್ತು ಜಿ. ಕೆ. ಶ್ರೀನಿವಾಸ ಸಾಲಿಯಾನ್ ಅವರಿಗೆ ಯಕ್ಷಸಿರಿ ಪ್ರಶಸ್ತಿ ಸಂದಿದೆ. ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಸ್ಮರಣಾರ್ಥ ನೀಡುವ ದತ್ತಿನಿಧಿ ಪ್ರಶಸ್ತಿಗೆ ದೇವದಾಸ ರಾವ್ ಕೊಡ್ಗಿ ಆಯ್ಕೆಯಾಗಿದ್ದಾರೆ. ಅಶೋಕ್ ಹಾಸ್ಯಗಾರ ಮತ್ತು ಕೆರೆಮನೆ ಶಿವಾನಂದ ಹೆಗಡೆ ಹಾಗೂ ಮಣಿಪಾಲ ಯುನಿವರ್ಸಲ್ ಪ್ರೆಸ್ 2024ನೇ ಸಾಲಿನ ಪುಸ್ತಕ ಬಹುಮಾನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 1 ರಿಂದ 3ರವರೆಗೆ ಶ್ರೀ ಲಕ್ಷಿ$್ಮ ಜನಾರ್ದನ ಯಕ್ಷಗಾನ ಕಲಾ ಮಂಡಳಿಯಿಂದ 'ಬಬ್ರುವಾಹನ ಕಾಳಗ' ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಿನ್ಯಾ, ರಿಜಿಸ್ಟ್ರಾರ್ ನಮ್ರತಾ ಉಪಸ್ಥಿತರಿದ್ದರು.