ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕರ್ಣಾಟಕ ಬ್ಯಾಂಕ್‌ನ ಎಂ.ಡಿ ಮತ್ತು ಸಿಇಓ ಎಂ. ರಾಘವೇಂದ್ರ ಭಟ್ ಸೂರು ನೂರರ ಸಂಪುಟ ಬಿಡುಗಡೆ ಮಾಡಿದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಲಾರಂಗ ಮಾಜಿ ಅಧ್ಯಕ್ಷ ಗಣೇಶ್ ರಾವ್, ಕೋಟ ಗೀತಾನಂದ ಫೌಂಡೇಶನ್ ಮುಖ್ಯಸ್ಥ ಆನಂದ ಸಿ. ಕುಂದರ್, ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ ಗಂಟಿಹೊಳೆ ಅಭ್ಯಾಗತರಾಗಿದ್ದರು.