ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯಜ್ಞ ಇವರಿಗೆ ಉದ್ಯಾವರದಲ್ಲಿ ನಂದಕುಮಾರ್ ಅಸೋಸಿಯೇಟ್ಸ್ ಮುಖ್ಯಸ್ಥ ಎಂ. ಗಂಗಾಧರ ರಾವ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ನಂದಾದೀಪ ಉದ್ಘಾಟಿಸಿ ಅಶೀರ್ವಚನ ನೀಡಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಕೆ. ಸತ್ಯೇಂದ್ರ ಪೈ, ಇಂಜಿನಿಯರ್ಸ್ ಅಸೋಶಿಯೇಶನ್ ಅಧ್ಯಕ್ಷ ಯೋಗಿಶ್ಚಂದ್ರಧರ್, ವಕೀಲ ಎಂ. ಗೋಪಿಕೃಷ್ಣ ರಾವ್, ಹಿರಿಯರಾದ ಯು.ವಿಶ್ವನಾಥ ಶೆಣೈ ಉಪಸ್ಥಿತರಿದ್ದರು. ಪ್ರಮುಖರಾದ ಎಂ.ಗೋಪಾಲ ಭಟ್, ಪಾಂಡುರಂಗ ಆಚಾರ್ , ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಎಸ್. ವಿ.ಭಟ್, ಪ್ರೊ.ಕೆ.ಸದಾಶಿವ ರಾವ್, ವಿದ್ಯಾ ಪ್ರಸಾದ್, ಸರಸ್ವತಿ ಜಿ.ರಾವ್, ಪಾವನಿ, ಸಿಎ ಹರಿಣಿ ಜಿ.ರಾವ್, ಕಮಲಾಕ್ಷಿ, ಐಶ್ವರ್ಯ ಪಾಲ್ಗೊಂಡಿದ್ದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ಸ್ವಾಗತಿಸಿದರು.