ಶುದ್ಧ ಕನ್ನಡ ಕಲಿಸುವ ಯಕ್ಷಗಾನ

 ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮತ್ತಿತರರಿದ್ದರು.
ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮತ್ತಿತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ
ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು, ಈ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಯಕ್ಷಗಾನ ಪರಿಶುದ್ಧವಾದ ಕನ್ನಡವನ್ನು ಕಲಿಸುವುದರ ಜತೆ, ಪುರಾಣ ಇತಿಹಾಸದ ಬಗ್ಗೆ ತಿಳಿಸುತ್ತದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಯಕ್ಷದ್ರುವ ಪಟ್ಲ ಪೌಂಡೇಶನ್ ವತಿಯಿಂದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಸದಸ್ಯ ಚಂದ್ರ ರಾಣ್ಯ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಯಕ್ಷ ಶಿಕ್ಷಣ ಸಮಿತಿ ಸಂಚಾಲಕ ವಾಸುದೇವ ಐತಾಳ್, ಪಟ್ಲ ಫೌಡೇಶನ್ ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ, ಕಿನ್ನಿಗೋಳಿ ಘಟಕ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಸಮಾಜ ಕಲ್ಯಾಣಾ ಇಲಾಖೆ ಉಪನಿರ್ದೇಶಕಿ ಹೇಮಲತಾ, ಯಕ್ಷಗುರು ವರುಣ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪುಟ್ಟಸ್ವಾಮಿ ಸ್ವಾಗತಿಸಿದರು. ವಿದ್ಯಾ ಉಡುಪ ವಂದಿಸಿದರು.

ಯಕ್ಷಶಿಕ್ಷಣಕ್ಕೆ ಪ್ರತಿ ವರ್ಷ ಪಟ್ಲ ಫೌಂಡೇಶನ್‌ನಿಂದ ಸುಮಾರು 80 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಪ್ರತ್ಯೇಕ ಪಾಠ ಕ್ರಮವನ್ನು ಪುಸ್ತಕ ರೂಪದಲ್ಲಿ ನೀಡಲಾಗುತ್ತಿದೆ. ಪ್ರತಿಯೊಂದು ಪಾಠದ ಕೊನೆಗೆ ಸ್ಕಾ ್ಯನಿಂಗ್ ಕೋಡ್ ನೀಡಲಾಗಿದ್ದು, ಇದನ್ನು ಸ್ಕಾ ್ಯನ್ ಮಾಡುವಾಗ ಅದಕ್ಕೆ ಸಂಬಂಧಿಸಿದ ವಿಡಿಯೋ ಬರುತ್ತದೆ, ಮುಂದಿನ ವರ್ಷ ಮಂಗಳೂರು ವಿಶ್ವವಿದ್ಯಾಲಯದಿಂದ ಯಕ್ಷಗಾನದ ಬಗ್ಗೆ ಪರೀಕ್ಷೆ ನಡೆಯಲಿದ್ದು ಪ್ರಮಾಣಪತ್ರವನ್ನು ನೀಡಲಾಗುತ್ತಿದೆ.

— ಪಟ್ಲ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net