ಸರ್ಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ: ಯಶ್​ಪಾಲ್​ ಸುವರ್ಣ

  ಶಾಸಕ ಯಶ್​ಪಾಲ್​ ಸುವರ್ಣ ಯಕ್ಷಗಾನ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಶಾಸಕ ಯಶ್​ಪಾಲ್​ ಸುವರ್ಣ ಯಕ್ಷಗಾನ ತರಬೇತಿ ಉದ್ಘಾಟಿಸಿ ಮಾತನಾಡಿದರು.
Published on
ಉಡುಪಿ: ಸರ್ಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಸಹಕಾರ ಮಹತ್ವದಾಗಿದೆ. ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಯಂತೆ ಅನುದಾನ ಒದಗಿಸಲಾಗಿದ್ದು, ಸುಮಾರು 4 ಲಕ್ಷ ವೆಚ್ಚದಿಂದ ನೂತನ ಶೌಚಾಲಯ ಕಟ್ಟಡ ನಿಮಾರ್ಣವಾಗಿದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು.
ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್​ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್​ ಆಚಾರ್ಯ, ಮಾಜಿ ಅಧ್ಯೆ ಸುಕನ್ಯಾ ಶೆಟ್ಟಿ, ಮಾಜಿ ನಗರಸಭಾ ಸದಸ್ಯ ವಿಜಯ ಕೊಡವೂರು, ದಾನಿಗಳಾದ ಆನಂದ, ಸ್ಥಳಿಯ ಪ್ರಮುಖರಾದ ಶರತ್​ ಬೈಲಕೆರೆ, ಗಾಯತ್ರಿ ಸುರೇಶ್​, ಕೃಷ್ಣ ಶೆಟ್ಟಿ, ಚರಣ್​ ರಾಜ್​, ಯಕ್ಷಗಾನ ಗುರು ರತ್ನಾಕರ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಶೌಚಾಲಯ, ವಿದ್ಯಾರ್ಥಿಗಳ ಶಾಲಾ ಸಂಸತ್​ ಹಾಗೂ ಶಾಲೆಯಲ್ಲಿ ಶಿಕ್ಷಕರಾಗಿದ್ದ ಪ್ರಕಾಶಿನಿ ಅವರ ಸ್ಮರಣಾರ್ಥ ಶಾಲಾ ವಿದ್ಯಾರ್ಥಿಗಳಿಗೆ ನಿರ್ಮಿಸಿದ ಸೈಕಲ್​ ಸ್ಟಾ$ಂಡ್​ ಉದ್ಘಾಟಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎನ್​. ಸ್ವಾಗತಿಸಿ, ಶಿಕ್ಷಕ ದಿವಾಕರ ನಾಯಕ್​ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net