ಯಕ್ಷಗಾನದಲ್ಲಿ ಅಸಂಬದ್ಧ ಸಂಭಾಷಣೆ ಸಲ್ಲದು: ಜಿ. ಶಂಕರ್​

ಕಾರ್ಯಕ್ರಮದಲ್ಲಿ ಸಿಗಂದೂರು ಮತ್ತು ಹಾಲಾಡಿ ಯಕ್ಷಗಾನ ಮೇಳಗಳ ಯಜಮಾನ ವೈ. ಕರುಣಾಕರ ಶೆಟ್ಟಿ ಅವರಿಗೆ  ಯಕ್ಷಪೋಷಕ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಗಂದೂರು ಮತ್ತು ಹಾಲಾಡಿ ಯಕ್ಷಗಾನ ಮೇಳಗಳ ಯಜಮಾನ ವೈ. ಕರುಣಾಕರ ಶೆಟ್ಟಿ ಅವರಿಗೆ ಯಕ್ಷಪೋಷಕ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
Published on
ಉಡುಪಿ: ಇಂದಿನ ದಿನಮಾನದಲ್ಲಿ ಟೆಂಟ್​ ಮೇಳಗಳನ್ನು ಮುನ್ನಡೆಸುವುದು ಕಷ್ಟಕರವಾಗಿದ್ದು, ಪ್ರೇಕ್ಷಕರನ್ನು ಉಳಿಸಿಕೊಳ್ಳುವುದು ಬಹುಮುಖ್ಯ. ಹೀಗಾಗಿ ಕಲಾವಿದರು ಉತ್ತಮ ಪ್ರದರ್ಶನ ನೀಡಬೇಕು. ಅಸಂಬದ್ಧ ಸಂಭಾಷಣೆಗಳನ್ನು ಕಡಿಮೆ ಮಾಡಬೇಕು. ಸಮಯದ ಮಿತಿಯನ್ನು ಪಾಲಿಸಬೇಕು ಎಂದು ಜಿ. ಶಂಕರ್​ ಫ್ಯಾಮಿಲಿ ಟ್ರಸ್ಟ್​ ಪ್ರವರ್ತಕ ಡಾ. ಜಿ. ಶಂಕರ್​ ಹೇಳಿದರು.

ಅಜ್ಜರಕಾಡು ಪುರಭವನದಲ್ಲಿ ಬೀಳಂಜೆ ಸಂಜೀವ ಹೆಗ್ಡೆ ಟ್ರಸ್ಟ್​ ಹಾಗೂ ಇಂದ್ರಾಳಿ ಯಕ್ಷಗಾನ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಯಕ್ಷಪೋಷಕ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಿಗಂದೂರು ಮತ್ತು ಹಾಲಾಡಿ ಯಕ್ಷಗಾನ ಮೇಳಗಳ ಯಜಮಾನ ವೈ. ಕರುಣಾಕರ ಶೆಟ್ಟಿ ಅವರಿಗೆ ಯಕ್ಷಪೋಷಕ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಾಹೆ ಸಹಕುಲಾಧಿಪತಿ ಡಾ. ಎಚ್​. ಎಸ್​. ಬಲ್ಲಾಳ್​ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪುರುಷೋತ್ತಮ ಶೆಟ್ಟಿ, ಯಕ್ಷಗಾನ ಕೇಂದ್ರ ಆಡಳಿತ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್​ ಹೆಗ್ಡೆ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಸ್ವಾಗತಿಸಿದರು.
ಸಭಾ ಕಾರ್ಯಕ್ರಮದ ನಂತರ ಬೀಳಂಜೆ ಸಂಜೀವ ಹೆಗ್ಡೆ ಟ್ರಸ್ಟ್​ ಹಾಗೂ ಜಿ. ಶಂಕರ್​ ಫ್ಯಾಮಿಲಿ ಟ್ರಸ್ಟ್​ ಮತ್ತು ಉಜ್ಜಲ್​ ಡೆವಲಪರ್ಸ್​ ಪ್ರಾಯೋಜಕತ್ವದಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net