2021ರಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ದುರುದ್ದೇಶ ಪೂರ್ವಕವಾಗಿ ಹಿಜಾಬ್ ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿದ್ದರು. ಈ ಸಂದರ್ಭದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಕೇವಲ ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.