ಅಸ್ಸಾಂಗೆ ತೆರಳಿದ್ದ ಯುವಕ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ (33) ಮೃತರು. ಪ್ರವಾಸದ ವೇಳೆ ಅಶೋಕ್‌ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net