ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು

death
death
Published on
ಕಾಸರಗೋಡು: ಇಲಿ ಪಾಷಾಣ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೂಡ್ಲು, ಚೆಟ್ಟುಂಗುಯಿ ಇಜ್ಜತ್ ನಗರದ ಎಸ್‌ಎಂ ಮಂಜಿಲ್‌ನ ಅಬ್ದುಲ್ ಮನಾಫ್ ಎಂಬುವರ ಪುತ್ರಿ ಆಮಿನಾ ನುಸಾ(18) ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಜೂ.25ರಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಆಮಿನಾ ನುಸಾ ಅವರನ್ನು ಚೆಂಗಳ, ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೋಯಿಕ್ಕೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾಸರಗೋಡು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net