ಉಳ್ಳಾಲ: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರ್ ಸರ್ಕಾರಿ ಶಾಲಾ ಬಳಿ ನಿವಾಸಿ ನಿತಿನ್ ಕುಮಾರ್ ಯಾನೆ ನೀತು(35) ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತ: ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಂಡಾಣ ಮಿತ್ರನಗರ ನಿವಾಸಿಯಾಗಿರುವ ಈತ ಪಿಲಾರುವಿನಲ್ಲಿರುವ ಬಾವ (ಅಕ್ಕನ ಗಂಡ) ಲಕ್ಷ್ಮಣ ಪಕ್ಕಳ ಎಂಬುವರ ಮನೆಯಲ್ಲಿ ವಾಸವಿದ್ದ. ಕ್ಯಾಟರಿಂಗ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಈತ ಕಳೆದೆರಡು ವರ್ಷಗಳಿಂದ ವೆರಿಕೋಸ್ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.
ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದಿದ್ದ. ಮಂಗಳವಾರ ರಾತ್ರಿ ಊಟ ಮುಗಿಸಿ ಕೋಣೆಗೆ ಸೇರಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ.