ಸಂವಿಧಾನವು ದೇಶದ ಪ್ರತಿ ಪ್ರಜೆಗೂ ಸ್ವತಂತ್ರವಾಗಿ ಜೀವಿಸಲು ಅವಕಾಶ ಮಾಡಿಕೊಟ್ಟಿದೆ. ಸಂಸತ್ತು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿರುವಂತಹ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಭಾರತವೂ ಒಂಛಆಗಿದ್ದು, ಭಾರತದ ಭೂವಿಸ್ತಾರಗಳನ್ನು ಗಮನಿಸಿದಾಗ ದೇಶದ ಜನಸಂಖ್ಯೆ, ಸಂಸತಿ, ಸಾಮಾಜಿಕ ವೈವಿಧ್ಯತೆಗಳು, ವಿಚಾರಗಳಲ್ಲಿ ಸ್ವಾಮ್ಯತೆ ಕಾಣಬಹುದಾಗಿದೆ. ಮಕ್ಕಳು ಪ್ರಜಾಪ್ರಭುತ್ವದ ಬಗ್ಗೆ ತಿಳಿದುಕೊಳ್ಳಲು ಯುವ ಸಂಸತ್ತು ಕಾರ್ಯಕ್ರಮ ಒಂದು ಉತ್ತಮ ವೇದಿಕೆಯಾಗಿದೆ. ಯುವ ಸಂಸತ್ತು ಸಭೆಗಳು ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳುಗಳ ಕಾಲ ನಡೆಯಲಿದ್ದು, ಶಾಲಾ-ಕಾಲೇಜುಗಳಲ್ಲಿ ಉತ್ತಮ ವಾಕ್ ಚಾತುರ್ಯವುಳ್ಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.