ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿ

ಉಡುಪಿ ಜಿಲ್ಲೆಯ ಶಾಲಾ ವಾಹನಗಳನ್ನು ಸೂಕ್ತ ತಪಾಸಣೆ ಮಾಡುವಂತೆ ಒತ್ತಾಯಿಸಿ ಡಿಸಿ ಸ್ವರೂಪಾ ಟಿ.ಕೆ. ಅವರಿಗೆ ಪ್ರಥ್ವಿರಾಜ್​ ಶೆಟ್ಟಿ ಮನವಿ ಸಲ್ಲಿಸಿದರು. ಅಭಿರಾಜ್​ ಸುವರ್ಣ, ಪ್ರದೀಪ್​ ಕುಂದರ್​, ಶ್ರೀವತ್ಸ, ಸುಶಾಂತ್​ ಪೂಜಾರಿ ಇತರರಿದ್ದರು.
ಉಡುಪಿ ಜಿಲ್ಲೆಯ ಶಾಲಾ ವಾಹನಗಳನ್ನು ಸೂಕ್ತ ತಪಾಸಣೆ ಮಾಡುವಂತೆ ಒತ್ತಾಯಿಸಿ ಡಿಸಿ ಸ್ವರೂಪಾ ಟಿ.ಕೆ. ಅವರಿಗೆ ಪ್ರಥ್ವಿರಾಜ್​ ಶೆಟ್ಟಿ ಮನವಿ ಸಲ್ಲಿಸಿದರು. ಅಭಿರಾಜ್​ ಸುವರ್ಣ, ಪ್ರದೀಪ್​ ಕುಂದರ್​, ಶ್ರೀವತ್ಸ, ಸುಶಾಂತ್​ ಪೂಜಾರಿ ಇತರರಿದ್ದರು.
Published on

* ಜಿಲ್ಲಾ ಯುವ ಮೋರ್ಚಾದಿಂದ ಡಿಸಿಗೆ ಮನವಿ

* ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟಿಸುವ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಕಳೆದ ತಿಂಗಳು 3 ಖಾಸಗಿ ಶಾಲೆಗಳ ವಾಹನಗಳು ಅಪಘಾತಕ್ಕೆ ಈಡಾಗಿದ್ದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯದೊಂದಿಗೆ ಜೀವಾಪಾಯದಿಂದ ಪಾರಾಗಿದ್ದಾರೆ. ಶಾಲಾ ವಾಹನಕ್ಕೆ ಮಕ್ಕಳನ್ನು ಕಳುಹಿಸುವ ಪಾಲಕರು ಇಂತಹ ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ, ಶಿಕ್ಷಣ ಹಾಗೂ ಪೊಲೀಸ್​ ಇಲಾಖೆ ಖಾಸಗಿ ಶಾಲೆಗಳಿಗೆ ಸೂಕ್ತ ನಿರ್ದೇಶನ ನೀಡಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟಿಸಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್​ ಶೆಟ್ಟಿ ಬಿಲ್ಲಾಡಿ ಎಚ್ಚರಿಕೆ ನೀಡಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿಗೆ ಯುವ ಮೋರ್ಚಾದ ಪದಾಧಿಕಾರಿಗಳೊಂದಿಗೆ ಮಂಗಳವಾರ (ಜು.14) ತೆರಳಿ ಡಿಸಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಅನುಭವಿ ಚಾಲಕರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಚಾಲಕರು ಅತಿ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು, ರಸ್ತೆ ಸುರಕ್ಷತಾ ನಿಯಮ ಪಾಲಿಸುತ್ತಿಲ್ಲ. ಸರಿಯಾಗಿ ನಿರ್ವಹಣೆ ಇಲ್ಲದ ವಾಹನಗಳ ಬಳಕೆ ಮಾಡಲಾಗುತ್ತಿದೆ. ಅಲ್ಲದೆ, ಶಾಲಾ ವಾಹನದಲ್ಲಿ ಮಿತಿಗಿಂತ ಹೆಚ್ಚು ವಿದಾರ್ಥಿಗಳನ್ನು ಒಯ್ಯುತ್ತಿದ್ದಾರೆ. ಮತ್ತೆ ಶಾಲಾ ವಾಹನಗಳು ಅಪಘಾತಕ್ಕೊಳಗಾದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್​ ಸುವರ್ಣ, ಪ್ರದೀಪ್​ ಕುಂದರ್​, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಉಡುಪಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಸುಶಾಂತ್​ ಪೂಜಾರಿ, ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರು, ಉಡುಪಿ ನಗರ ಹಾಗೂ ಉಡುಪಿ ಗ್ರಾಮಾಂತರ ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net