

ಕುಂದಾಪುರ: ಆನೆಗುಡ್ಡೆ ಗೋಪುರದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮಧ್ಯಾಹ್ನ ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿದ್ದಾರೆ.
ಪ್ರವಾಸಿ ಬಸ್ ದೇವಸ್ಥಾನದ ಕಡೆಯಿಂದ ತ್ರಾಸಿಯತ್ತ ತೆರಳಲು ಆನೆಗುಡ್ಡೆ ಗೋಪುರದ ಬಳಿ ತಿರುವು ಪಡೆಯುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಪ್ರವೇಶಿಸಿದ್ದು, ಮಂಗಳೂರಿನಿಂದ ಕುಂದಾಪುರದ ಕಡೆಗೆ ವೇಗವಾಗಿ ಬರುತ್ತಿದ್ದ ಎರಡು ಬುಲೆಟ್ ಟ್ಯಾಂಕರ್ಗಳ ಪೈಕಿ ಒಂದು ಟ್ಯಾಂಕರ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದೆ. ಈ ವೇಳೆ ಟ್ಯಾಂಕರ್ ಬಸ್ಸಿನ ಬಲಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ. ಅಪಘಾತದಿಂದ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.