ರಾಯಚೂರಿನಲ್ಲಿ ದಲಿತರ ಕೊಲೆಗೆ ನ್ಯಾಯ ಒದಗಿಸಲು ಆಗ್ರಹ

ಉಡುಪಿ: ರಾಯಚೂರಿನಲ್ಲಿ ಕಳೆದ ತಿಂಗಳು ಇಬ್ಬರು ಮಹಿಳೆಯರು ಸೇರಿ ಮೂವರು ದಲಿತರ ಕೊಲೆ ಪ್ರಕರಣ ನಡೆದಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವರದಿಯಾಗಿದೆ. ಸರ್ಕಾರ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಳೂರು ಆಗ್ರಹಿಸಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಮಿತಿ, ಸಿಐಟಿಯು ಉಡುಪಿ ಜಿಲ್ಲಾ ಸಮಿತಿ, ಜನವಾದಿ ಮಹಿಳಾ ಸಂಘಟನೆ, ಡಿವೈಎಫ್​ಐ, ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಕೃಷಿಕೂಲಿಕಾರರ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ದಲಿತರ ಭೂಮಿ ಸೇರಿದಂತೆ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾರ್ಯದರ್ಶಿ ರವಿ ವಿ.ಎಂ., ಮುಖಂಡರಾದ ಅಶ್ವಿನಿ ಲಾರೆನ್ಸ್​ ಮೂಡುಬೆಳ್ಳೆ, ಮನೋಜ್​ ಕುಮಾರ್​, ನಾಗರತ್ನ ಆರ್​. ನಾಡ, ಸುಶೀಲಾ ಬಳ್ಳೂರು, ಅಣ್ಣಪ್ಪ ಬಳ್ಳೂರು, ಬಾಬು ಬಳ್ಳೂರು, ದಯಾನಂದ ಮಲ್ಪೆ ಹಾಗೂ ರಾಮ ಕಾರ್ಕಡ ಮಾತನಾಡಿದರು. ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್​ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್​ ವಿ., ಕೋಶಾಧಿಕಾರಿ ಕವಿರಾಜ್​ ಎಸ್​. ಕಾಂಚನ್​, ಉಪಾಧ್ಯಕ್ಷ ಎಚ್​. ನರಸಿಂಹ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಫ್ಣಿ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಸುರೇಶ್​ ಕಲ್ಲಾಗಾರ, ಡಿವೈಎಫ್​ಐ ಮುಖಂಡರಾದ ಸೈಯಾದ್​ ಹಾಗೂ ಮುರಳಿ, ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಮುಖಂಡರಾದ ಬಲೀಸ್​ ಮತ್ತು ಸುನೀತಾ ಶೆಟ್ಟಿ, ಕೃಷಿಕೂಲಿಕಾರರ ಸಂಘದ ಜಿಲ್ಲಾ ಮುಖಂಡರಾದ ನಾಗರತ್ನ ನಾಡ. ಇದ್ರೀಸ್​ ಹೂಡೆ ಹಾಗೂ ಹಯವದನ ಮೂಡುಸಗ್ರಿ ಉಪಸ್ಥಿತರಿದ್ದರು. ನಂತರ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
protest
ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
Published on

ರಾಯಚೂರಿನಲ್ಲಿ ಕಳೆದ ತಿಂಗಳು ಇಬ್ಬರು ಮಹಿಳೆಯರು ಸೇರಿ ಮೂವರು ದಲಿತರ ಕೊಲೆ ಪ್ರಕರಣ ನಡೆದಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವರದಿಯಾಗಿದೆ. ಸರ್ಕಾರ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಳೂರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net