

ವಿಜಯವಾಣಿ ಸುದ್ದಿಜಾಲ ಉಡುಪಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ.-ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ನೀಡಲ್ಪಡುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಆಯ್ಕೆಯಾಗಿದ್ದಾರೆ ಎಂದು ಬಳಗದ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದರು.
ಉಡುಪಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.24ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲರಂಗದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ ಎಚ್.ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಾರ್ಯಾಧ್ಯಕ್ಷ ಕುಮಾರ ಪ್ರಸಾದ್, ಪ್ರಸನ್ನ ಹಿರೇಮಠ ಉಪಸ್ಥಿತರಿದ್ದರು.