ಯುಗಾದಿ ಉತ್ಸವ ನಾಳೆ

Published on

ಸಿಂಧನೂರು: ನಗರದ ಸತ್ಯಗಾರ್ಡನ್‌ನಲ್ಲಿ ಮಾ.30 ರಂದು ಶ್ರೀ ವಿಶ್ವಾವಸು ನಾಮ ಸಂವತ್ಸರ ನಿಮಿತ್ತ ಯುಗಾದಿ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುಗಾದಿ ಉತ್ಸವ ಆಚರಣಾ ಸಮಿತಿ ಸಂಚಾಲಕ ಎಂ.ಭಾಸ್ಕರ್ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹದಿನೈದು ವರ್ಷಗಳಿಂದ ಯುಗಾದಿ ಉತ್ಸವ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಕಣ್ಮಣಿ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಪ್ರಗತಿಪರ ರೈತ ರಮಣರೆಡ್ಡಿ, ಕಾರುಣ್ಯಾಶ್ರಮದ ಚನ್ನಬಸಯ್ಯಸ್ವಾಮಿ ಹಿರೇಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾನುವಾರ ಸಂಜೆ ಬೇವು-ಬೆಲ್ಲ ವಿತರಿಸಿ, ಪಂಚಾಂಗ ಶ್ರವಣ, ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸಂಚಾಲಕ ವೈ.ನರೇಂದ್ರನಾಥ ಮಾತನಾಡಿ, ಯುಗಾದಿ ಪ್ರಕೃತಿಯಲ್ಲಿ ಹೊಸತನ್ನು ತರುವ ಹಬ್ಬವಾಗಿದ್ದು, ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ ಎನ್ನುವಂತೆ ಸಾಂಪ್ರದಾಯಿಕ ಉಡುಗೆ ತೊಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಿದ್ದೇವೆ ಎಂದು ತಿಳಿಸಿದರು.

ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಧ್ವರಾಜ ಆಚಾರ್ಯ, ಸಂಚಾಲಕರಾದ ಅಮರೇಶಪ್ಪ ಮೈಲಾರ, ವೆಂಕಟಗಿರಿ ಜಾಲಿಹಾಳ, ಎನ್.ಶಿವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net